ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮಲೆನಾಡಿನಲ್ಲಿ ಮಂಗನ ಕಾಯಿಲೆ(Monkey Pox)ಗೆ ಮೊದಲ ಬಲಿಯಾಗಿದೆ. ವಯೋಸಹಜ ಅನಾರೋಗ್ಯದಿಂದ ಚಿಕ್ಕಮಗಳೂರು (Chikmagalur) ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವೃದ್ಧ ಬಳಲುತ್ತಿದ್ದರು. ಇವರನ್ನು ಮಣಿಪಾಲ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಇದೀಗ ಕೊನೆಯುಸಿರೆಳೆದಿದ್ದಾರೆ.

ತಪಾಸಣೆ ಮಾಡಿದಾಗ ವೃದ್ಧನಲ್ಲಿ ಕೆಎಫ್​ಡಿ ಪತ್ತೆಯಾಗಿದೆ. ವೃದ್ಧನ ಸಾವಿನಿಂದ ಮಲೆನಾಡಿನ ಜನರಲ್ಲಿ ಆತಂಕ ಹೆಚ್ಚಿದೆ.

ಉತ್ತರ ಕನ್ನಡದಲ್ಲೂ ಹೆಚ್ಚಿದ ಮಂಗನ ಕಾಯಿಲೆ
ಉತ್ತರ ಕನ್ನಡ ಜಿಲ್ಲೆಯಲ್ಲೂ ಮಂಗನ ಕಾಯಿಲೆ ಪ್ರಕರಣ ಹೆಚ್ಚುತ್ತಿದೆ. ಅದಕ್ಕೆ ಸಾಕ್ಷಿ ಎಂಬಂತೆ ಕಳೆದ 10 ದಿನಗಳಲ್ಲಿ ಬರೊಬ್ಬರಿ 21 ಜನರಿಗೆ ಸೋಂಕು ತಗುಲಿದ್ದು, ಬಿಸಿಲು ಹೆಚ್ಚಾದಂತೆ ಕಾಯಿಲೆ ಹೆಚ್ಚಾಗುವ ಆತಂಕವೂ ಜನರಲ್ಲಿ ಮನೆ ಮಾಡಿದೆ. ಇನ್ನು ಈ ಸೋಂಕು ಹರಡುವಿಕೆ ತಡೆಗೆ ಸದ್ಯ ರೋಗ ನಿರೋಧಕ ಲಸಿಕೆ ಇಲ್ಲವಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ವಹಿಸಿಕೊಳ್ಳುವುದೊಂದೇ ದಾರಿ ಮತ್ತು ಅತೀ ಅವಶ್ಯಕ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!