ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಣೆಯಲ್ಲಿ ಶಂಕಿತ ಜಿಬಿ ಸಿಂಡ್ರೋಮ್‌ಗೆ ಮೊದಲ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಚೀನಾ ವೈರಸ್ ಕೋವಿಡ್ ಹಾವಳಿ ಇನ್ನೂ ಸಂಪೂರ್ಣವಾಗಿ ತಣ್ಣಗಾಗಿಲ್ಲ.. ಅದಾಗಲೇ ಒಂದಿಲ್ಲೊಂದು ಆರೋಗ್ಯ ಸಮಸ್ಯೆಗಳು ಆಗಾಗ ಸುದ್ದಿಯಾಗುತ್ತಿವೆ. ಎಂಪಾಕ್ಸ್, ಹೆಚ್ ಎಂಪಿವಿ ವೈರಸ್ ಗಳ ಸುದ್ದಿ ಹಸಿರಾಗಿರುವಂತೆಯೇ ಇತ್ತ ಪುಣೆಯಲ್ಲಿ ಶಂಕಿತ ಜಿಬಿ ಸಿಂಡ್ರೋಮ್‌ಗೆ ಮೊದಲ ಬಲಿಯಾಗಿದೆ. ಅಂತೆಯೇ ಈ ಜಿಬಿ ಸಿಂಡ್ರೋಮ್ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ.
ಶಂಕಿತ ‘ಗಿಲ್ಲೈನ್ ಬರ್ರೆ ಸಿಂಡ್ರೋಮ್’ಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಸೋಲಾಪುರದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಸೋಮವಾರ ತಿಳಿಸಿದ್ದಾರೆ. ಇದು ಶಂಕಿತ ಜಿಬಿಎಸ್‌ನಿಂದ ಮಹಾರಾಷ್ಟ್ರದಲ್ಲಿ ಸಂಭವಿಸಿದ ಮೊದಲ ಸಾವು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಅಂತೆಯೇ ಪುಣೆಯಲ್ಲಿ ಶಂಕಿತ ಜಿಬಿಎಸ್ ಪ್ರಕರಣಗಳ ಸಂಖ್ಯೆ 101ಕ್ಕೆ ಏರಿಕೆಯಾಗಿದೆ ಎಂದು ಹೇಳಲಾಗಿದೆ.