ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂಡ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ದಿನದಿಂದ ದಿನಕ್ಕೆ ಸಿದ್ದರಾಮಯ್ಯಗೆ ಸಂಕಷ್ಟಗಳು ಹೆಚ್ಚಾಗುತ್ತಿದೆ. ಇದರ ನಡುವೆ ಮೂಡ ಹಗರಣದಲ್ಲಿ ಮೊದಲ ವಿಕೆಟ್ ಪತನಗೊಂಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತರಾಗಿರುವ ಜಿಟಿ ದಿನೇಶ್ ಕುಮಾರ್ ಅಮಾನತುಗೊಂಡಿದ್ದಾರೆ.
ದಿನೇಶ್ ಕುಮಾರ್ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನೇಶ್ ಕುಮಾರ್ ಮೇಲೆ ಮೂಡ ಹಗರಣದ ಕುರಿತು ಗಂಭೀರ ಆರೋಪಗಳಿವೆ ಅನ್ನೋ ಕಾರಣಕ್ಕೆ ಅಮಾನತು ಮಾಡಲಾಗಿದೆ. ಇದೀಗ ದಿನೇಶ್ ಕುಮಾರ್‌ನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ದಿನೇಶ್ ಕಮಾರ್ ಮುಡಾದಲ್ಲಿ ಆಯುಕ್ತರಾಗಿದ್ದ ವೇಳೆ ನಡೆದಿದೆ ಎನ್ನಲಾದ ಅಕ್ರಮಗಳ ಹಿನ್ನಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.