ದಿಗಂತ ವರದಿ ಕಾರವಾರ:
ಮೀನುಗಾರರ ಧುರೀಣ, ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್ ಅವರು ಹೃದಯಾಘಾತದಿಂದ ನಿಧನರಾದರು.
ಸೋಮವಾರ ಮಧ್ಯರಾತ್ರಿಯ ನಂತರ ಎದೆ ನೋವಿನಿಂದ ಕುಸಿದು ಬಿದ್ದ ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಜಿಲ್ಲೆಯ ಮೀನುಗಾರರ ಧುರೀಣರಾಗಿ ಮೀನುಗಾರರ ಪರ ಹಲವಾರು ಹೋರಾಟಗಳಲ್ಲಿ ಭಾಗಿಯಾಗಿದ್ದ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಕಾರವಾರ ಅಂಕೋಲಾ ಕ್ಷೇತ್ರದ ರಾಜಕೀಯದಲ್ಲಿ ಪಕ್ಷದ ಶಕ್ತಿಯಾಗಿ ಕೆಲಸ ಮಾಡಿದ್ದರು.
ರಾಜು ತಾಂಡೇಲ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಸತೀಶ ಸೈಲ್ ಆಸ್ಪತ್ರೆಗೆ ದೌಡಾಯಿಸಿದ್ದು ಸಾವಿರಾರು ಜನರು ಆಸ್ಪತ್ರೆ ಬಳಿ ಸೇರಿದ್ದಾರೆ.