ಮೀನುಗಾರರ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ: ಡಿ.ಕೆ. ಶಿವಕುಮಾರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಈ ಹಿಂದೆ ಮೀನುಗಾರರಿಗೆ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಹಾನಿಯಾದರೆ ಪರಿಹಾರವಾಗಿ ₹6 ಲಕ್ಷ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು ₹8 ಲಕ್ಷಕ್ಕೆ ಏರಿಸಿದೆ. ಮುಂದಿನ ದಿನಗಳಲ್ಲಿ ಅದನ್ನು ₹10 ಲಕ್ಷಕ್ಕೆ ಏರಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಣೆ ಮಾಡಿದರು.

ಈ ವರ್ಷ ಮೀನುಗಾರರಿಗಾಗಿ 10 ಸಾವಿರ ಮನೆಗಳನ್ನು ನೀಡಲು ತೀರ್ಮಾನ ಮಾಡಿದ್ದೇವೆ. ಮಂಗಳೂರಿನಲ್ಲಿ ₹49 ಕೋಟಿ ವೆಚ್ಚದಲ್ಲಿ ಮೀನುಗಾರಿಕೆ ಬಂದರು ಕಾಮಗಾರಿ ಪೂರ್ಣಗೊಂಡಿದೆ. ಸಮೀಕ್ಷೆ ಪ್ರಕಾರ 99% ಮೀನುಗಾರರು ಆರ್ಥಿಕವಾಗಿ ಹಿಂದುಳಿದಿದ್ದು, ಈ ಮೀನುಗಾರರ ರಕ್ಷಣೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಮೀನು ಮಾರಾಟ ಮಾಡಲು ತ್ರಿಚಕ್ರ ಎಲೆಕ್ಟ್ರಿಕ್ ವಾಹನ ಹಂಚಲಾಗಿದೆ ಎಂದು ತಿಳಿಸಿದರು.

ಈ ಕರಾವಳಿ ಭಾಗದಲ್ಲಿ ನೂತನ ಪ್ರವಾಸೋದ್ಯಮ ನೀತಿ ರೂಪಿಸಬೇಕು ಎಂದು ಸಚಿವರಾದ ಹೆಚ್.ಕೆ ಪಾಟೀಲ್ ಅವರಿಗೆ ಸಚಿವ ಸಂಪುಟ ಸಭೆಯಲ್ಲಿ ತಿಳಿಸಿದ್ದೇವೆ. ನೂತನ ಪ್ರವಾಸೋದ್ಯಮ ನೀತಿಯಲ್ಲಿ ಮಂಗಳೂರಿನಿಂದ ಕಾರವಾರದವರೆಗೂ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಲಹೆಗಳನ್ನು ಪಡೆದಿದ್ದೇವೆ. ಈ ಭಾಗದಲ್ಲಿ ಪಂಚತಾರಾ ಹೋಟೆಲ್ ಗಳಿಲ್ಲ. ಈ ಬಗ್ಗೆಯೂ ಗಮನ ಹರಿಸಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ನಮ್ಮ ಕಾರ್ಯಕ್ರಮ ಜಾರಿ ಮಾಡುತ್ತೇವೆ. ಈ ಭಾಗದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಯಕ್ರಮ ರೂಪಿಸಲಾಗುವುದು. ಇಲ್ಲಿನ ಬಂದರುಗಳ ಅಭಿವೃದ್ಧಿ ಮಾಡಲಾಗುವುದು. ಕರಾವಳಿ ಭಾಗ ನಮ್ಮ ರಾಜ್ಯದ ಶಕ್ತಿ. ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!