ಕರಾವಳಿಯಲ್ಲಿ ಜೂನ್‌ 1ರಿಂದ ಮೀನುಗಾರಿಕೆ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಡುಪಿ ಜಿಲ್ಲೆಯ ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31ರವರೆಗೆ ಒಟ್ಟು 61 ದಿನ ಮೀನುಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟರೀಕೃತ ಎಂಜಿನ್‌ ಹಾಗೂ ಸಾಂಪ್ರದಾಯಿಕ ಮತ್ತು ನಾಡದೋಣಿಗಳಲ್ಲಿ ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಆಳಸಮುದ್ರ ಮೀನುಗಾರಿಕೆ ಸಂಪೂರ್ಣ ನಿಷೇಧಿಸಲಾಗಿದ್ದು, 10 ಅಶ್ವಶಕ್ತಿ ಹೆಚ್ಚು ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕಾ ಚಟುವಟಿಕೆ ಕೈಗೊಳ್ಳುವಂತಿಲ್ಲ.

ಮೀನುಗಾರಿಕೆ ನಿಷೇಧದ ಸರಕಾರದ ಆದೇಶವನ್ನು ಉಲ್ಲಂಘಿಸುವ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವರ್ಷದ ಅವಧಿಗೆ ಡೀಸೆಲ್‌ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಹೊರಡಿಸಿರುವ ಪ್ರಕಟಣೆಯಲ್ಲಿ ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!