ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ: 8 ಮಂದಿ ರಕ್ಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಉಡುಪಿ ಜಿಲ್ಲೆಯ ಮಲ್ಪೆ ಮೂಲದ ಸೀ ಹಂಟರ್ ಹಡಗು, ಹಡಗಿನ ಕೆಳಭಾಗದಲ್ಲಿ ಕಬ್ಬಿಣದ ವೆಲ್ಡಿಂಗ್ ಬಿಟ್ಟು ಹೋದ ಪರಿಣಾಮ ಮುಳುಗಿದೆ. ದೋಣಿಯಲ್ಲಿದ್ದ ಎಂಟು ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ.

ಹಡಗು ಮಲ್ಪೆಯಿಂದ ಮಹಾರಾಷ್ಟ್ರದ ಕಡೆಗೆ ಸಾಗುತ್ತಿತ್ತು. ಕಾರವಾರದಿಂದ 9 ನಾಟಿಕಲ್ ಮೈಲುಗಳಷ್ಟು ಲೈಟ್ ಹೌಸ್ ಬಳಿ ಚಲಿಸುತಿದ್ದ ವೇಳೆ ಬೋಟ್ ತಳಭಾಗದ ಕಬ್ಬಿಣದ ಭಾಗದಲ್ಲಿ ವೆಲ್ಡಿಂಗ್ ಬಿಟ್ಟುಹೋಗಿದೆ.

ಮುಳುಗುವ ಹಂತದಲ್ಲಿದ್ದ ಬೋಟ್‌ನ್ನು ದಡಕ್ಕೆ ತರಲು ಪ್ರಯತ್ನ ಪಟ್ಟರೂ. ಬೋಟ್ ಮುಳುಗಡೆಯಿಂದ 1 ಕೋಟಿ ರೂ.ಗೂ ಹೆಚ್ಚು ನಷ್ಟವಾಗಿದೆ ಎನ್ನಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!