ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: ಮೀನುಗಾರರ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಕನ್ನಡ (Uttara Kannada) ಜಿಲ್ಲೆಯ ಕರಾವಳಿ ಭಾಗದಲ್ಲಿ ಅಬ್ಬರದ ಗಾಳಿ ಜೊತೆ ಗುಡುಗು ಸಹಿತ ಮಳೆ ಸುರಿಯುತ್ತಿದ್ದು, ಇದರ ಪರಿಣಾಮ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ಬೋಟ್ ವೊಂದು ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾಗಿರುವ ಘಟನೆ ನಡೆದಿದೆ.

ಓಂ ಗಣೇಶ್ ಹೆಸರಿನ ಮಹಾದೇವ ಖಾರ್ವಿ ಎಂಬವರಿಗೆ ಸೇರಿದ ಬೋಟ್ (Boat) ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ ನಾಲ್ಕು ಜನ ಮೀನುಗಾರರನ್ನು (Fishermen) ರಕ್ಷಣೆ ಮಾಡಲಾಗಿದೆ. ಘಟನೆಯಿಂದ ಲಕ್ಷಾಂತರ ರೂ. ಹಾನಿ ಸಂಭವಿಸಿದೆ.

ಇಂದು ಬೆಳಿಗ್ಗೆ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಸಮುದ್ರದಲ್ಲಿ ಏಕಾಏಕಿ ಭಾರಿ ಗಾತ್ರದ ಅಲೆಗಳು ಆರಂಭವಾಗಿವೆ. ಬಿರುಗಾಳಿ ಜೊತೆಗೆ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಸಂಪೂರ್ಣ ಮುಳುಗಡೆಯಾಗಿದೆ. ಇದನ್ನು ಗಮನಿಸಿದ ಇನ್ನೊಂದು ಬೋಟ್ ನವರು ನೀರಿನಲ್ಲಿ ಮುಳುಗುತ್ತಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!