Sunday, February 5, 2023

Latest Posts

ಮೀನು ವ್ಯಾಪಾರಿಯ ಹತ್ಯೆ ಪ್ರಕರಣ: ಆರೋಪಿ ಬಂಧನ

ಹೊಸದಿಗಂತ ವರದಿ,ಮಡಿಕೇರಿ:

ಪಾಲಿಬೆಟ್ಟದ ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ನೌಶಾದ್ ಎಂಬಾತನನ್ನು ಸಿದ್ದಾಪುರ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ.
ಡಿ.10 ರಂದು ಮೀನು ವ್ಯಾಪಾರಿ ಮಹಮ್ಮದ್ ತೌಸಿರ್ ಮೇಲೆ ಕಾರು ಹತ್ತಿಸಿ ಗಂಭೀರ ಗಾಯಗೊಳಿಸಿದ್ದ ನಂತರ ಕಾರಿನೊಂದಿಗೆ‌ ಪರಾರಿಯಾಗಿದ್ದ ಆರೋಪಿ, ಕಾರನ್ನು ಮೂರ್ನಾಡು ಗ್ರಾಮದ ಮುಖ್ಯ ರಸ್ತೆಯಲ್ಲಿ ನಿಲ್ಲಿಸಿ ತಲೆಮರೆಸಿಕೊಂಡಿದ್ದ.
ಈ ಸಂಬಂಧ‌ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತಲ್ಲದೆ, ಆರೋಪಿಯ ಪತ್ತೆಗಾಗಿ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ. ಅಯ್ಯಪ್ಪ ಅವರು ಪೊಲೀಸ್ ತಂಡವನ್ನು ರಚಿಸಿದ್ದರು.
ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಶಿವಶಂಕರ್ ನೇತೃತ್ವದಲ್ಲಿ ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ಹಾಗೂ ಸಿಬ್ಬಂದಿಗಳು ತಲೆಮರಸಿಕೊಂಡಿದ್ದ ಆರೋಪಿಯನ್ನ ಮೈಸೂರಿನಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದು, ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!