ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮವಾಗಿ ವಾಸಿಸುತ್ತಿದ್ದ ಐವರು ಬಾಂಗ್ಲಾದೇಶದ ನುಸುಳುಕೋರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ದೆಹಲಿಯ ಸದರ್ ಬಜಾರ್ ಪ್ರದೇಶದಲ್ಲಿದ್ದ ಇಬ್ಬರು ಬಾಂಗ್ಲಾದೇಶಿಗಳು ಹಾಗೂ ಹೊರ ಜಿಲ್ಲೆಯಲ್ಲಿದ್ದ ಮೂವರನ್ನು ಬಂಧಿಸಲಾಗಿದೆ. ಐವರು ಬಾಂಗ್ಲಾದೇಶಿಗಳು ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದರು. ಅವರ ದಾಖಲೆಗಳನ್ನು ಸಹ ಪರಿಶೀಲನೆ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಫೆಬ್ರವರಿಯಲ್ಲಿ, ದೆಹಲಿ ಪೊಲೀಸರು ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಶಂಕಿತ 16 ಜನರನ್ನು ಬಂಧಿಸಿದ್ದರು. ವೀಸಾ ಇಲ್ಲದೆ ಈ ಜನರು ಭಾರತದಲ್ಲಿ ಅವಧಿ ಮೀರಿ ನೆಲೆಸಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತರನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ ಮುಂದೆ ಹಾಜರುಪಡಿಸಲಾಗಿದ್ದು, ಗಡೀಪಾರು ಮಾಡವಂತೆ ಆದೇಶ ನೀಡಿದ್ದಾರೆ.