ಜನ್ಮದಿನದ ಆಚರಣೆಗೆ ತೆರಳಿದ್ದ ಐವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ಕಟ್ನಿ ನದಿಯಲ್ಲಿ ವಿಹಾರಕ್ಕೆಂದು ಬಂದು, ಸ್ನಾನಕ್ಕೆ ಇಳಿದಿದ್ದ ಐವರು ಬಾಲಕರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಮೂರು ಮಕ್ಕಳ ಶವ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಕ್ಕೆ ಹುಡುಕಾಟ ನಡೆಸಲಾಗುತ್ತಿದೆ. ಮೃತರೆಲ್ಲರೂ 13-15  ವರ್ಷ ವಯಸ್ಸಿನವರಾಗಿದ್ದು, ಗುರುತು ಪತ್ತೆಯಾಗಿಲ್ಲ.

ಐವರಲ್ಲಿ ಒಬ್ಬನ ಜನ್ಮದಿನದ ಆಚರಣೆಗೆ ನದಿ ಬಳಿ ಬಂದಿದ್ದಾರೆ. ಐವರು ಈಜಲು ನೀರಿಗಿಳಿದಿದ್ದು, ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾರೆ. ಸಂಜೆಯಾದರೂ ಮನೆಗೆ ಬಾರದ ಮಕ್ಕಳಿಗಾಗಿ ಪೋಷಕರು ಹುಡುಕಾಟ ನಡೆಸಿದ್ದು, ನದಿ ಬಳಿ ಬಂದಿದ್ದಾರೆ. ಮಕ್ಕಳ ಬಟ್ಟೆಗಳು ದಡದಲ್ಲಿಯೇ ಇದ್ದವು ಎನ್ನಲಾಗಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸತತ 10 ಗಂಟೆಗಳ ಕಾರ್ಯಾಚರಣೆ ನಂತರ ಮೂರು ಮಕ್ಕಳ ಶವ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಕಾರ್ಯಾಚರಣೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!