ಲೋಕಸಭೆಯಿಂದ ಐವರು ಕಾಂಗ್ರೆಸ್ ​ಸಂಸದರು ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ( Lok Sabha)ಯಿಂದ ಐವರು ಕಾಂಗ್ರೆಸ್(Congress) ​ ಸಂಸದರನ್ನು ಅಮಾನತುಗೊಳಿಸಲಾಗಿದೆ.

ಕಲಾಪದ ವೇಳೆ ಭಾರಿ ಭದ್ರತಾ ಲೋಪ ಪ್ರಕರಣದ ಕುರಿತು ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಐವರು ಕಾಂಗ್ರೆಸ್​ ಸಂಸದರನ್ನು ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಅಮಾನತುಗೊಳಿಸಲಾಗಿದೆ.

ಲೋಕಸಭೆಯಲ್ಲಿ ಬುಧವಾರ ಗದ್ದಲ ಉಂಟಾಗಿತ್ತು, ಪ್ರೇಕ್ಷಕರ ಗ್ಯಾಲರಿಯಿಂದ ಸಂಸದರಿರುವ ಕಡೆಗೆ ಇಬ್ಬರು ನುಗ್ಗಿದ್ದರು, ಅಷ್ಟೇ ಅಲ್ಲದೇ ಸ್ಮೋಕ್​ ಬಾಂಬ್ ಸಿಡಿಸಿದ್ದರು. ಈ ಕುರಿತು ಕಾಂಗ್ರೆಸ್​ ಸಂಸದರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಸಂಸದರ ಅಶಿಸ್ತಿನ ವರ್ತನೆಗಾಗಿ ಐವರು ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಬೆಳಗ್ಗೆಯಷ್ಟೇ ಟಿಎಂಸಿಯ ರಾಜ್ಯಸಭಾ ಸಂಸದ ಡೆರೆಕ್ ಒಬ್ರಿಯಾನ್ ಅವರನ್ನು ಇದೇ ಕಾರಣಗಳಿಂದಾಗಿ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!