ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ, ಶೀಘ್ರ ಚುನಾವಣೆ ನಡೆಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

ಜಿಬಿಎ ರಚನೆ ಮಾಡಲಾಗಿದೆ ಈ ಮೂಲಕ ಐದು ಪಾಲಿಕೆಗಳನ್ನು ನಾವು ಮಾಡಿಯೇ ತೀರುತ್ತೇವೆ. ಈ ಕುರಿತು ಶಾಸಕ ರಿಜ್ವಾನ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ. ಕೆಲವರು ಸಾರ್ವಜನಿಕವಾಗಿ ವಿರೋಧ ಮಾಡಬಹುದು ಆದರೆ ಆಡಳಿತ ದೃಷ್ಟಿಯಿಂದ ಇದನ್ನು ಮಾಡಲೇಬೇಕಾಗಿದೆ. ಪಾಲಿಕೆಗಳು ರಚನೆಯಾದರೆ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನ ಮಾನ ನೀಡಲೇಬೇಕು ಎಂದು ನಾವು ತೀರ್ಮಾನಿಸಿದ್ದೇವೆ. ಇದಕ್ಕೆ ಅಡಿಪಾಯ ತಯಾರು ಮಾಡಬೇಕಿದೆ. ಏಕೆಂದರೆ ಡಿ.ಕೆ.ಶಿವಕುಮಾರ್ ಒಬ್ಬನೇ ಸರ್ಕಾರ ತರಲು ಆಗುವುದಿಲ್ಲ. ಕಾರ್ಯಕರ್ತರೇ ಇಲ್ಲಿ ಜೀವಾಳ. ನಾವು ವಿಧಾನಸೌಧದಲ್ಲಿ ತೀರ್ಮಾನ ಮಾಡಬಹುದು ಆದರೆ ಸರ್ಕಾರದ ರಾಯಭಾರಿಗಳು ನೀವು. ನಮ್ಮ ಭವಿಷ್ಯ, ಬೆಂಗಳೂರು ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!