Thursday, August 11, 2022

Latest Posts

ನಕಲಿ ಮದ್ಯ ಸೇವನೆ: ಐದು ಜನ ಸಾವು, ಹಲವರು ಅಸ್ವಸ್ಥ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಕಲಿ ಮದ್ಯ ಸೇವಿಸಿ ಐದು ಜನ ಮೃತಪಟ್ಟಿದ್ದು, ಹಲವರು ಅಸ್ವಸ್ಥಗೊಂಡಿರುವ ಘಟನೆ ಬಿಹಾರದ ಮುಜಾಫರ್ ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಸ್ಥಳದಲ್ಲಿ ಮದ್ಯವನ್ನೂ ಸಂಪೂರ್ಣ ನಿಷೇಧಿಸಲಾಗಿತ್ತು.

ಸರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ರುಪೌಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾಲ್ವರು ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಇನ್ನೋರ್ವನ ಶವ ಅವರ ಮನೆಯ ಬಳಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪಂಚಾಯಿತಿ ಸಮಿತಿ ಸದಸ್ಯ ಸೇರಿದಂತೆ ಇಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೃತರ ಮನೆಯನ್ನು ಪರಿಶೀಲನೆ ನಡೆಸಿದಾಗ ಖಾಲಿ ಮದ್ಯ ಮತ್ತು ಮೀಥೈಲ್ ಆಲ್ಕೋಹಾಲ್ ಬಾಟಲಿಗಳ ರಾಶಿಗಳು ಸಿಕ್ಕಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ನಡೆಸಲಾಗುತ್ತಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ನಿರ್ದಿಷ್ಟ ವಿಷಕಾರಿ ವಸ್ತುವನ್ನು ಸೇವಿಸಿ ಐದು ಜನರು ಮೃತಪಟ್ಟಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಮುಜಾಫರ್ ಪುರ ಹಿರಿಯ ಪೊಲೀಸ್ ಅಧೀಕ್ಷಕ ಜಯಂತ್ ಕಾಂತ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss