Thursday, March 30, 2023

Latest Posts

ಮಹಾರಾಷ್ಟ್ರದಲ್ಲಿ ಅಕಾಲಿಕ ಮಳೆಗೆ ಐವರ ಸಾವು: ಹಿಮಾಚಲದಲ್ಲಿ ಯೆಲ್ಲೋ ಅಲರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ (Maharashtra) ಪರ್ಭಾನಿಯ ಜಿಲ್ಲೆಯಲ್ಲಿ ಅಕಾಲಿಕ ಮಳೆಗೆ ಐವರು ಮೃತಪಟ್ಟು, 23 ಜನ ಗಾಯಗೊಂಡ ಘಟನೆ ನಡೆದಿದೆ .
ಹವಾಮಾನ ವೈಪರೀತ್ಯದಿಂದಾಗಿ ದೇಶದ ಕೆಲವೆಡೆ ಅಕಾಲಿಕ ಮಳೆಯಾಗುತ್ತಿದೆ. ಮರಾಠವಾಡ (Marathwada) ಪ್ರದೇಶದ ಎಂಟು ಜಿಲ್ಲೆಗಳಲ್ಲಿ 2.4 ಮಿ.ಮೀ ಮಳೆ ದಾಖಲಾಗಿದೆ. ಆಲಿಕಲ್ಲು (Hailstorms) ಮಳೆಯಿಂದಾಗಿ 4,950 ಹೆಕ್ಟೇರ್ ಜಾಗದಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ. 25 ಪ್ರಾಣಿಗಳು ಸಾವಿಗೀಡಾಗಿವೆ.
ರಾಜಸ್ಥಾನದಲ್ಲಿ (Rajasthan)ಪ್ರತ್ಯೇಕ ಘಟನೆಯಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ.
ಹಿಮಾಚಲ ಪ್ರದೇಶದ (Himachal Pradesh) 10 ಜಿಲ್ಲೆಗಳಲ್ಲಿ ಮಾ. 18 ರಿಂದ 20ರವರೆಗೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!