ಮಳೆ ಅಬ್ಬರಕ್ಕೆ ತತ್ತರಿಸಿದ ತೆಲಂಗಾಣ: ಐವರು ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ತೆಲಂಗಾಣದಲ್ಲಿ ಶುಕ್ರವಾರದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವಾರು ಅನಾಹುತಗಳು ಸಂಭವಿಸಿವೆ. ಮಳೆ ಸಂಬಂಧಿತ ಘಟನೆಗಳಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಮೇದಕ್ ಜಿಲ್ಲೆಯ ಚೆಗುಂಟಾದಲ್ಲಿ ಶನಿವಾರ ಮುಂಜಾನೆ ಮಳೆಯಿಂದಾಗಿ ಕಾರ್ಖಾನೆಯ ಕಾಂಪೌಂಡ್ ಗೋಡೆ ಕುಸಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮೇಡಕ್‌ನ ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಗೋಡೆ ಕುಸಿತ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಸುರಿದ ಭಾರೀ ಹಳೆಯ ಕಟ್ಟಡವೊಂದು ಕುಸಿದು ಪಕ್ಕದ ಗುಡಿಸಲಿನ ಮೇಲೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ.
ಶನಿವಾರ ಬೆಳಗ್ಗೆ ನರಸಿಂಗಿ-ವಲ್ಲಭೀಪುರ ಜಂಕ್ಷನ್‌ನಲ್ಲಿ ನೀರು ನಿಂತಿದ್ದರಿಂದ ಬೈಕ್ ಸ್ಕಿಡ್ ಆಗಿ ರಸ್ತೆ ವಿಭಜಕಕ್ಕೆ ತಲೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶುಕ್ರವಾರ ಹೈದರಾಬಾದ್ ಮತ್ತು ತೆಲಂಗಾಣದ ಭಾಗಗಳಲ್ಲಿ ಭಾರೀ ಮಳೆ ಸುರಿದು ನಗರ ಮತ್ತು ರಾಜ್ಯದ ಹಲವಾರು ಭಾಗಗಳು ಜಲಾವೃತವಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಇಂದು ವಿಕಾರಾಬಾದ್, ಮುಲುಗು, ಪೆದ್ದಪಲ್ಲಿ, ಕರೀಂನಗರ, ಜಯಶಂಕರ್ ಭೂಪಾಲಪಲ್ಲಿ, ಕಾಮರೆಡ್ಡಿ, ಮೇದಕ್, ಸಂಗಾರೆಡ್ಡಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!