ಕೊಪ್ಪಳ ಅಪಘಾತದಲ್ಲಿ ಐವರ ಮರಣ: ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಹೊಸದಿಗಂತ ವರದಿ ಕೊಪ್ಪಳ:
ಕುಕನೂರು ತಾಲ್ಲೂಕು ಭಾನಾಪುರ ಬಳಿ ಸಂಭವಿಸಿದ ಅಪಘಾತದಲ್ಲಿ 05 ಜನ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ತಲಾ 05 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಗಳು ಘೋಷಿಸಿದ್ದಾರೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಅವರು, ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ತಾವು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಮುಖ್ಯಮಂತ್ರಿ ಗಳಿಗೆ ಮಾಡಿದ ಮನವಿಗೆ ಮುಖ್ಯಮಂತ್ರಿ ಗಳು ತಕ್ಷಣ ಸ್ಪಂದಿಸಿ, ಮೃತ ಕುಟುಂಬಕ್ಕೆ ತಲಾ 05 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.
ಸಚಿವ ಹಾಲಪ್ಪ ಆಚಾರ್ ಅವರು ಕೊಪ್ಪಳ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು, ಅಲ್ಲದೆ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!