ಹೊಸದಿಗಂತ ಡಿಜಿಟಲ್ ಡೆಸ್ಕ್:
“ಭವಿಷ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಪಂಚ ಗ್ಯಾರಂಟಿ ಯೋಜನೆಗಳೆ ಕಾಪಾಡುತ್ತವೆ ಎನ್ನುವ ವಿಶ್ವಾಸ ನನಗಿದೆ. ಗ್ಯಾರಂಟಿ ಯೋಜನೆಗಳು ಸಮಾಜದಲ್ಲಿ ದೊಡ್ಡ ಸಾಮಾಜಿಕ ಬದಲಾವಣೆಯನ್ನು ಉಂಟು ಮಾಡಿವೆ. ಆರ್ಥಿಕವಾದ ಶಕ್ತಿ ನೀಡಿವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟಿದ್ದಾರೆ.
ರಾಮನಗರದಲ್ಲಿ ಶನಿವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಗಳ ಪದಾಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು.
“ಬಿಜೆಪಿ ಮತ್ತು ಜನತಾದಳದವರು ಮುಂದಿನ ದಿನಗಳಲ್ಲಿ ಹೇಗಾದರೂ ಮಾಡಿ ಈ ಗ್ಯಾರಂಟಿ ಯೋಜನೆಗಳನ್ನು ಯಾರಿಗೂ ಸಿಗದಂತೆ ಮಾಡಬೇಕೆನ್ನುವ ಷಡ್ಯಂತ್ರ ಮಾಡುತ್ತಿದ್ದಾರೆ. ಐದು ಗ್ಯಾರಂಟಿಗಳು ಉಳಿಯಬೇಕು ಎಂದರೆ ಕಾಂಗ್ರೆಸ್ ಸರ್ಕಾರ ಶಾಶ್ವತವಾಗಿ ಇರಬೇಕು. ಈ ನಿಟ್ಟಿನಲ್ಲಿ ನೀವುಗಳು ಕೆಲಸ ಮಾಡಬೇಕು” ಎಂದರು.