‘ಐದು ಗ್ಯಾರಂಟಿ’ ಗ್ಯಾರಂಟಿ: ತಾತ್ವಿಕ ಒಪ್ಪಿಗೆ ನೀಡಿದ ನೂತನ ಸರಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ಮಹತ್ವದ ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು,
ಬಳಿಕ ಸುದ್ದಿಗೋಷ್ಠಿಯಲ್ಲಿ ಚುನಾವಣೆ ವೇಳೆ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದಾರೆ .

ಆದ್ರೆ ಈ ಯೋಜನೆ ಹೊಂದಿರುವ ಷರತ್ತು, ನಿಂಬಂಧನೆಗಳ ಕುರಿತು ಶೀಘ್ರವೇ ಸಚಿವ ಸಂಪುಟ ಸಭೆ ನಡೆಸಿ ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಈ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗು ಇತರೆ ಸಂಪುಟ ಸದಸ್ಯರು ಇದ್ದರು.

ಕಾಂಗ್ರೆಸ್ 5 ಗ್ಯಾರಂಟಿ ಯೋಜನೆಗಳು:
ಗೃಹಜ್ಯೋತಿ- ಎಲ್ಲಾ ಮನೆಗಳಿಗೂ 200 ಯೂನಿಟ್‌ ಉಚಿತ ಕರೆಂಟ್
ಗೃಹಲಕ್ಷ್ಮಿ- ಪ್ರತಿ ಮನೆ ಯಜಮಾನಿಗೂ ಮಾಸಿಕ 2000 ರೂ. ಸಹಾಯಧನ
ಅನ್ನಭಾಗ್ಯ – ಬಿಪಿಎಲ್‌ ಕುಟುಂಬಗಳಿಗೆ 10 ಕೆಜಿ ಆಹಾರ ಧಾನ್ಯ
ಯುವನಿಧಿ – ಎರಡು ವರ್ಷಗಳ ಕಾಲಕ್ಕೆ ನಿರುದ್ಯೋಗಿ ಭತ್ಯೆ – ಪದವೀಧರರಿಗೆ ತಿಂಗಳಿಗೆ 3000 ರೂ. ಮತ್ತು ಡಿಪ್ಲೋಮಾ ಮಾಡಿದವರಿಗೆ ತಿಂಗಳಿಗೆ 1500 ರೂ. ನೆರವು
ಸಖಿ – ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಸಾಮಾನ್ಯ ಬಸ್ಸುಗಳಲ್ಲಿ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ ( ಕರ್ನಾಟಕದ ಮಹಿಳೆಯರಿಗೆ)

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!