ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜಭವನದ ಅಂಗಳದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.
ರಾಜಭವನದ ಅಂಗಳದಲ್ಲಿರುವ ಮಹಾತ್ಮಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ನಂತರ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಭದ್ರತಾ ಅಧಿಕಾರಿ ಎಸಿಪಿ ನಿಂಗಾರೆಡ್ಡಿ ನೇತೃತ್ವದ ಪೊಲೀಸ್ ತಂಡದಿಂದ ಗೌರವ ರಕ್ಷೆ ನೀಡಲಾಯಿತು.
ಕರ್ನಾಟಕ ದೇಶದ ಪ್ರಗತಿಪರ ರಾಜ್ಯ. ಕರ್ನಾಟಕ ರಾಜ್ಯವು ಅಭಿವೃದ್ಧಿ ಉಪಕ್ರಮಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಗುರಿಯೊಂದಿಗೆ ಮೂಲ ಸೇವೆಗಳಿಗೆ ಪ್ರವೇಶ ಸೇರಿದಂತೆ ವಿವಿಧ ನವೀನ ಮತ್ತು ಅಂತರ್ಗತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ನಮ್ಮ ರಾಜ್ಯವು ಪ್ರವರ್ತಕವಾಗಿದೆ.ಪಂಚ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿಯಾಗ್ತಿದೆ ಎಂದು ತಿಳಿಸಿದರು.