Monday, December 11, 2023

Latest Posts

ಜಂಬೂ ಸವಾರಿಗೆ ಕ್ಷಣಗಣನೆ: ಗಮನ ಸೆಳೆಯಲು ಸಜ್ಜಾಗಿದೆ ಸರ್ಕಾರದ ಪಂಚ ಗ್ಯಾರಂಟಿಯ ಸ್ತಬ್ಧಚಿತ್ರಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೈಸೂರಿನಲ್ಲಿ ನಾಡಹಬ್ಬ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಗಮನ ಸೆಳೆಯಲು ಸಜ್ಜಾಗಿವೆ.

ಈ ಬಾರಿಯ ಜಂಬೂ ಸವಾರಿ ಮೆರವಣಿಗೆಯಲ್ಲಿ ರಾಜ್ಯ ಸರ್ಕಾರದ ಐದು ಯೋಜನೆಗಳ ಸಂದೇಶ ಸಾರುವ ಸ್ತಬ್ಧ ಚಿತ್ರಗಳು ಕೂಡ ಪಾಲ್ಗೊಳ್ಳಲಿವೆ.

ಶಕ್ತಿ ಯೋಜನೆ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ, ಯುವನಿಧಿ ಯೋಜನೆಯ ಸ್ಥಬ್ಧ ಚಿತ್ರಗಳು ಸೇರಿದಂತೆ ಒಟ್ಟು 49 ಟ್ಯಾಬ್ಲೋಗಳು ಮೆರವಣಿಗೆಯಲ್ಲಿ ಸಾಗಲಿವೆ.

ಅರಮನೆಯಿಂದ ಬನ್ನಿ ಮಂಟಪದವರೆಗೂ ಸ್ಥಬ್ಧ ಚಿತ್ರಗಳು ಸಾಗಲಿವೆ. ರಾಜ್ಯದ ವಿವಿಧ ಭಾಗಗಳಿಂದ ಟ್ಯಾಬ್ಲೊಗಳು ಆಗಮಿಸಿವೆ.

ಮೈಸೂರು ದಸರಾ ವೀಕ್ಷಿಸಲು ದೇಶ ವಿದೇಶದಿಂದ ಪ್ರವಾಸಿಗರು ಆಗಮಿಸಿದ್ದಾರೆ. ಅಲ್ಲದೆ ಈ ವೇಳೆ ಪೊಲೀಸ್‌ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದ್ದು, 11 ಐಪಿಎಸ್ ಅಧಿಕಾರಿಗಳು ಸೇರಿದಂತೆ 4000 ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!