Thursday, June 30, 2022

Latest Posts

ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ: ಐವರು ಭಾರತೀಯರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಕೆನಡಾದಲ್ಲಿ ಸಂಭವಿಸಿದ ಭೀಕರ ಆಟೋ ಅಪಘಾತದಲ್ಲಿ 5 ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆನಾಡದ ಟೊರೊಂಟೊ ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಂದು ಕೆನಡಾದ ಭಾರತದ ಹೈ ಕಮಿಷನರ್ ಅಜಯ್ ಬಿಸಾರಿಯಾ ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಕೆನಡಾದಲ್ಲಿ ಹೃದಯ ವಿದ್ರಾವಕ ದುರಂತ ಸಂಭವಿಸಿದೆ. ಸಂತ್ರಸ್ತರ ಕುಟುಂಬಕ್ಕೆ ಸಂತಾಪವನ್ನು ಸೂಚಿಸುತ್ತೇನೆ. ಮೃತಪಟ್ಟ ಭಾರತೀಯ ವಿದ್ಯಾರ್ಥಿಗಳ ಸ್ನೇಹಿತರೊಂದಿಗೆ ಕೆನಡಾದ ಭಾರತದ ಹೈ ಕಮಿಷನ್ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ.
ಹರ್‌ಪ್ರೀತ್ ಸಿಂಗ್, ಜಸ್ಪಿಂದರ್ ಸಿಂಗ್, ಕರಣ್‌ಪಾಲ್ ಸಿಂಗ್, ಮೋಹಿತ್ ಚೌಹಾನ್ ಮತ್ತು ಪವನ್ ಕುಮಾರ್ ಮೃತಪಟ್ಟ ವಿದ್ಯಾರ್ಥಿಗಳು ಎಂದು ಕೆನಡಾ ಪೊಲೀಸರು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳೆಲ್ಲರೂ ಗ್ರೇಟರ್ ಟೊರೊಂಟೊ ಮತ್ತು ಮಾಂಟ್ರಿಯಲ್ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳು ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss