ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐದು ಜನರು ಸಾವನ್ನಪ್ಪಿದ್ದು, 60 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇ ನಲ್ಲಿ ಇಂದು ಮುಂಜಾನೆ ನಡೆದಿದೆ.
ಬೆಂಗಳೂರಿನಿಂದ ಚೆನ್ನೈ ಕಡೆಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಓರ್ವ ಮಹಿಳೆ ಸೇರಿ ನಾಲ್ಕು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್‌ಇಟಿಸಿ ಬಸ್ ಚಾಲಕ ಕೆ ಎಲುಮಲೈ (47) ಮತ್ತು ಚಿತ್ತೂರಿನ ಬಿ ಅಜಿತ್ (25) ಹಾಗೂ ಓಮ್ನಿಬಸ್ ಚಾಲಕ ಎನ್ ಸೈಯದ್ ಮೃತ ದುರ್ದೈವಿಗಳು.
ಅಪಘಾತದಲ್ಲಿ ಎರಡು ವಾಹನಗಳ ಮುಂಭಾಗ ಸಂಪೂರ್ಣ ಪುಡಿಪುಡಿಯಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ತಲುಪಿದ ಪೊಲೀಸರು ಗಾಯಾಳುಗಳನ್ನು ಸುಮಾರು ಹತ್ತು ಆಂಬ್ಯುಲೆನ್ಸ್ ಗಳಲ್ಲಿ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ.