ಭೀಕರ ರಸ್ತೆ ಅಪಘಾತ: ಐದು ಮಂದಿ ಸಾವು, ಮೂವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾರು ಮತ್ತು ಅಪರಿಚಿತ ವಾಹನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 5 ಮಂದಿ ಮೃತಪಟ್ಟಿದ್ದು, ಮೂರು ಮಂದಿ ಗಾಯಾಗೊಂಡಿರುವ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಥಿಕ್ರಿ ಗ್ರಾಮದ ಸಮೀ‍ಪ ರಾಷ್ಟ್ರೀಯ ಹೆದ್ದಾರಿಯ ಬಳಿ ಮಂಗಳವಾರ ತಡ ರಾತ್ರಿ ಈ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆಡಿದೆ. ಈ ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಮತ್ತೊಂದು ವಾಹನಕ್ಕೆ ಡಿಕ್ಕಿಯಾಗಿದೆ. ಇದರಿಂದ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!