ಜಾರ್ಖಂಡ್‌ನಲ್ಲಿ ಕನ್ವರ್ ಯಾತ್ರಾರ್ಥಿಗಳ ವಾಹನಕ್ಕೆ ವಿದ್ಯುತ್ ತಗುಲಿ ಐವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಕನ್ವರ್ ಯಾತ್ರಾರ್ಥಿಗಳು ತೆರಳುತ್ತಿದ್ದ ವಾಹನಕ್ಕೆ ಹೈಟೆನ್ಷನ್ ಓವರ್‌ಹೆಡ್ ತಂತಿ ತಗುಲಿ ಐವರು ಯಾತ್ರಿಕರು ಮೃತಪಟ್ಟಿದ್ದಾರೆ.

ಕನ್ವರ್ ಯಾತ್ರೆ ವೇಳೆ ವಿದ್ಯುತ್ ತಗುಲಿ ಐವರು ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬಾಳುಮಠ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ ತಂ ತೋಲದಲ್ಲಿ ಈ ಘಟನೆ ನಡೆದಿದೆ. ಯಾತ್ರಿಕರು ದಿಯೋಘರ್‌ನ ಬಾಬಾ ಬೈದ್ಯನಾಥ ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ಅವರ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!