ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಕನ್ನಡ ಜಿಲ್ಲೆಯ ಶಿರಸಿ ಬಳಿ ಬಂಡಲ್ ಹತ್ತಿರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರ್‌ನಲ್ಲಿ ಐವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಬಸ್, ಕುಮಟಾದಿಂದ ಶಿರಸಿಗೆ ಬರುತ್ತಿದ್ದ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಸ್‌ನ ಮುಂಭಾಗದ ಗಾಜು ಒಡೆದುಹೋಗಿದ್ದು, ಚಾಲಕನೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ. ಮೃತರು ಮಂಗಳೂರಿನವರು ಎಂಬ ಮಾಹಿತಿ ಲಭ್ಯವಾಗಿದ್ದು, ಅವರ ಗುರುತು ಪತ್ತೆಯಾಗಿಲ್ಲ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.