ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐದು ಮಂದಿ ಮೃತಪಟ್ಟಿದ್ದಾರೆ. ಬೆಳಗಿನ ಜಾವ ಕಾರು ಹಾಗೂ ಕಂಟೇನರ್ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಹರಿಯಾಣ ಮೂಲದ ಐವರು ಮೃತಪಟ್ಟಿದ್ದಾರೆ.
ಲೊನಾವ್ಲಾ ಸಮೀಪದ ಮುಂಬೈನಿಂದ ಪುಣೆ ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.