ಕಾರು – ಟ್ರಕ್‌ ನಡುವೆ ಭೀಕರ ಅಪಘಾತ: 5 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾರು ಮತ್ತು ಟ್ರಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮನ್ಮಾಡ್-ಯೋಲಾ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ರೋಹಿತ್ ಧನವತೆ, ಶ್ರೇಯಸ್ ಧನವತೆ, ಲಲಿತ್ ಸೋನಾವಾನೆ, ಗಣೇಶ್ ಸೋನಾವಾನೆ ಮತ್ತು ಪ್ರತೀಕ್ ನಾಯಕ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ನಾಸಿಕ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ನಂದಗಾಂವ್ ತಾಲೂಕಿನ ಅಂಕೈಬಾರಿ ಶಿವಾರದ ಬಳಿ ಮಳೆ ಬರುತ್ತಿದ್ದ ವೇಳೆ ಕಾರೊಂದು ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ. ಮೃತದೇಹಗಳನ್ನು ಮನ್ಮಾಡ್‌ನ ಉಪಜಿಲ್ಲಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಟ್ರಕ್ ಚಾಲಕನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ನಂದಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!