ಹಳಿ ತಪ್ಪಿದ ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲು: ಐವರು ಸಾವು, 100ಕ್ಕೂ ಹೆಚ್ಚು ಮಂದಿ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ ಭಾರಿ ಅವಘಡ ಸಂಭವಿಸಿದ್ದು, ಐವರು ಸಾವನ್ನಪ್ಪಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪ.ಬಂಗಾಳದ ಡೊಮೊಹಾನಿ ಎಂಬಲ್ಲಿ ತೆರಳುತ್ತಿದ್ದಾಗ ರೈಲು ಹಳಿ ತಪ್ಪಿದ್ದು ಬೋಗಿಗಳು ಚೆಲ್ಲಾಪಿಲ್ಲಿಯಾಗಿವೆ. 12 ಬೋಗಿಗಳು ಹಾನಿಗೀಡಾಗಿವೆ. ಘಟನೆಯ ಮಾಹಿತಿ ಪಡೆದ ಡಿಆರ್​ಎಂ ಮತ್ತು ಎಡಿಆರ್​ಎಂ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.
ದುರ್ಘಟನೆಯಿಂದ ತಕ್ಷಣ ಎಚ್ಚೆತ್ತುಕೊಂಡಿರುವ ರೈಲ್ವೇ ಇಲಾಖೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.
ಬಿಕಾನೇರ್-ಗುವಾಹಟಿ ಎಕ್ಸ್‌ಪ್ರೆಸ್‌ನ ದುರಂತದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಘಟನೆಯಲ್ಲಿ ಗಾಯಗೊಂಡವರ ರಕ್ಷಣೆ ಮತ್ತು ಗಾಯಾಳುಗಳಿಗೆ ವೈದ್ಯಕೀಯ ನೆರವು ನೀಡಲಾಗುವುದು ಎಂದು ಟ್ವೀಟ್​ ಮಾಡಿದ್ದಾರೆ.
ಪರಿಹಾರ ಘೋಷಣೆ
ದುರಂತದಲ್ಲಿ ಸಾವನ್ನಪ್ಪಿದವರಿಗೆ 5 ಲಕ್ಷ ಪರಿಹಾರ. ಅಲ್ಲದೇ, ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ, ಸಣ್ಣಪುಟ್ಟ ಗಾಯಾಳುಗಳಿಗೆ 25 ಸಾವಿರ ರೂಪಾಯಿ ನೆರವು ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಇಲಾಖೆ ತಿಳಿಸಿದೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!