ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯ ರಾಮದುರ್ಗದ ಚುಂಚನೂರು ಬಳಿ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಮೃತ ಯಾತ್ರಾರ್ಥಿಗಳ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಗೋವಿಂದ ಕಾರಜೋಳ ಘೋಷಿಸಿದ್ದಾರೆ.
ಈ ಬಗ್ಗೆ ಮಾತನಾಡಿ, ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸೂಚಿಸಿದ್ದಾರೆ. ಸಿಎಂ ಸೂಚನೆ ಮೇರೆಗೆ ಮೃತರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ಪ್ರಕಟಿಸುತ್ತೇನೆ ಎಂದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರಿಗೂ ಸೂಕ್ತ ಚಿಕಿತ್ಸೆ ನೀಡುವ ಬಗ್ಗೆ ಮಾತನಾಡಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಸ್ಥರಿಗೆ ಅಗಲಿಕೆಯ ನೋವು ತಡೆದುಕೊಳ್ಳುವ ಶಕ್ತಿ ದೇವರು ನೀಡಲಿ ಎಂದಿದ್ದಾರೆ.