January22, 2026
Thursday, January 22, 2026
spot_img

ರಾಯರ ದರುಶನಕ್ಕೆ ಹೊರಟಿದ್ದ ವೇಳೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲ್‌ ಜಿಲ್ಲೆಯ ಕೊಟೆಕಲ್‌ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 164ರಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಇದರಲ್ಲಿ ಇಬ್ಬರು ಪುಟ್ಟ ಮಕ್ಕಳೂ ಇದ್ದಾರೆ. ಮತ್ತೊಂದು ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಟುಂಬಸ್ಥರು ಒಂದೇ ಕಾರಿನಲ್ಲಿ ಮಂತ್ರಾಲಯಕ್ಕೆ ಹೊರಟಿದ್ದ ವೇಳೆ ಎಮ್ಮಿಗನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Must Read