ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲೀಯರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳೊಂದಿಗೆ ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲೀಯರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಪಡೆಗಳ ಜಂಟಿ ತಂಡವೊಂದು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದಾಗ ಮದ್ದೇಡ್ ಪೊಲೀಸ್ ಠಾಣಾ ವ್ಯಾಪ್ತಿಯ ಬಂಡೆಪಾರ-ಕೊರಂಜೆಡ್ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗ್ಗೆ ಎನ್ ಕೌಂಟರ್ ನಡೆದಿದೆ ಎಂದು ಬಸ್ತಾರ್ ವಲಯದ ಐಜಿಪಿ ಪಿ. ಸುಂದರ್ ರಾಜ್ ತಿಳಿಸಿದ್ದಾರೆ.

ಇಂದ್ರವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಬರುವ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ಚಲನವಲನ ಬಗ್ಗೆ ಮಾಹಿತಿ ಸಿಕ್ಕ ನಂತರ ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯ ಪಡೆ ಶನಿವಾರ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಇಂದು ಮಧ್ಯಾಹ್ನ 3-4 ಗಂಟೆಯವರೆಗೂ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲೀಯರ ಮೃತದೇಹಗಳು ಪತ್ತೆಯಾಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!