Sunday, August 14, 2022

Latest Posts

ಕೊರೋನಾ ತವರು ಚೀನಾದಲ್ಲಿ ಮತ್ತೆ ಐದು ಹೊಸ ಕೇಸ್ ಪತ್ತೆ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ತವರು ಎಂದೇ ಹೆಸರಾದ ಚೀನಾದಲ್ಲಿ ಮತ್ತೆ ಐದು ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಸೋಮವಾರ ತಿಳಿಸಿದೆ.
ಬೀಜಿಂಗ್​ನ ಲಿಯಾನಿಂಗ್​ನಲ್ಲಿ ಮೂರು ಹಾಗೂ ಅನ್ಹುಯಿಯಲ್ಲಿ ಎರಡು ಪ್ರಕರಣಗಳು ವರದಿಯಾಗಿವೆ ಎಂದು ಖಾಸಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಇದಲ್ಲದೇ ಹೊರಗಿನಿಂದ ಬಂದವರಲ್ಲಿ 20 ಪ್ರಕರಣ ದಾಖಲಾಗಿವೆ ಎಂದು ಆಯೋಗ ತಿಳಿಸಿದೆ.
ಕೋವಿಡ್-19ಗೆ ಸಂಬಂಧಿಸಿದ ಯಾವುದೇ ಹೊಸ ಸಾವುಗಳು ಚೀನಾದಲ್ಲಿ ವರದಿಯಾಗಿಲ್ಲ. ಚೀನಾದಲ್ಲಿ ಈವರೆಗೆ 90,847 ಕೊರೋನಾ ಪ್ರಕರಣಗಳು ದಾಖಲಾಗಿದ್ದು, 4,636 ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss