ನಾಳೆ ಐವರು ನೂತನ ಸುಪ್ರೀಂಕೋರ್ಟ್ ನ್ಯಾಯಾಧೀಶರ ಪ್ರಮಾಣ ವಚನ ಸ್ವೀಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌   

ಸೋಮವಾರ (ನಾಳೆ) ಐವರು ನೂತನ ಸುಪ್ರೀಂಕೋರ್ಟ್ ನ್ಯಾಯಾಧೀಶರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನ್ಯಾಯಮೂರ್ತಿ ಪಂಕಜ್ ಮಿಥಾಲ್ ( ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ನ್ಯಾಯಮೂರ್ತಿ ಸಂಜಯ್ ಕರೋಲ್ ( ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ನ್ಯಾಯಮೂರ್ತಿ ಪಿ.ವಿ. ಸಂಜಯ್ ಕುಮಾರ್ ( ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ) ಸೇರಿದಂತೆ ಇತರ ಇಬ್ಬರು ಹಿರಿಯ ಹೈಕೋರ್ಟ್ ನ್ಯಾಯಾಧೀಶರರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ( ನ್ಯಾಯಾಧೀಶರು ಪಾಟ್ನಾ ಹೈಕೋರ್ಟ್) ನ್ಯಾಯಮೂರ್ತಿ ಮನೋಜ್ ಮಿಶ್ರಾ ( ನ್ಯಾಯಮೂರ್ತಿ ಮನೋಜ್ ಮಿಶ್ರಾ( ನ್ಯಾಯಾಧೀಶರು ಅಲಹಾಬಾದ್ ಹೈಕೋರ್ಟ್) ಕೂಡಾ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

ಸುಪ್ರೀಂಕೋರ್ಟ್ ನ ಹೊಸ ಕಟ್ಟಡ ಸಂಕೀರ್ಣದ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಎಲ್ಲಾ ನೂತನ ನ್ಯಾಯಾಧೀಶರಿಗೆ ದೇಶದ ಮುಖ್ಯ ನ್ಯಾಯಮೂರ್ತಿ ಪ್ರಮಾಣ ವಚನ ಬೋಧಿಸಲಿದ್ದಾರೆ.

ಕೊಲಿಜಿಯಂ ಕಳೆದ ವರ್ಷ ಡಿಸೆಂಬರ್ 13 ರಂದು ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಧೀಶರ ಹುದ್ದೆಗೆ ಎಲ್ಲಾ ಐದು ಹೆಸರುಗಳನ್ನು ಶಿಫಾರಸು ಮಾಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!