ಹೊಸದಿಗಂತ ಡಿಜಿಟಲ್ ಡೆಸ್ಕ್:
ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ 4 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಹರ್ದೋಯಿ ಬಿಲಹೌರ್-ಕತ್ರಾ ಹೆದ್ದಾರಿಯಲ್ಲಿ ಈ ಅಪಘಡ ಸಂಭವಿಸಿದೆ. ಇವರೆಲ್ಲರೂ ವಾಹನದಲ್ಲಿ ಬರಕಾಂತ್ ಗ್ರಾಮದಿಂದ ನಯಾಗಾಂವ್‌ಗೆ ಹೋಗುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಹರ್ದೋಯಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.