ಐದು ಜನ ರೈತರಿಗೆ ‘ಅಮಿತ್ ಶಾ’ ಭೇಟಿಗೆ ಅವಕಾಶ : ಸಚಿವ ಗೋಪಾಲಯ್ಯ ಭರವಸೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಜಿಲ್ಲೆಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದೆ ಹೇಳಿಕೊಳ್ಳಲು ಐದು ಜನ ರೈತರನ್ನು ಅಮಿತ್ ಶಾ ಅವರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡುತ್ತೇನೆ ಎಂದು ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಭರವಸೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ವಿವಿಧ ಸಂಘಟನೆಗಳ ರೈತರು ಮುಖಂಡರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ನಾವೆಲ್ಲರೂ ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದವರು ರೈತರ ಸಮಸ್ಯೆಗಳನ್ನು ಕುರಿತು ಜನವರಿ 07ರೋಳಗೆ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ ರಾಜ್ಯಸರ್ಕಾರದಿಂದ ಬಗೆಹರಿಸುವಂತಹ ಸಮಸ್ಯೆಗಳನ್ನು ಬಗೆಹರಿಸಿಕೊಡುತ್ತೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!