ಕಾರು, ಸ್ಕೂಟಿ, ಪಾದಾಚಾರಿಗಳ ಮೇಲೆ ಹರಿದ ಟ್ರಕ್:‌ ಐವರ ಸಾವು, ಹಲವರು ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಲಖಿಂಪುರ ಖೇರಿಯ ಗೋಲಾ ಬೆಹ್ರೈಚ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್‌ಗೆ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಸ್ಕೂಟಿ ಕಾರಿನೊಳಗೆ ಸಿಲುಕಿಕೊಂಡಿದೆ. ಪಾದಚಾರಿಗಳು ಎರಡು ವಾಹನಗಳನ್ನು ಬೇರ್ಪಡಿಸಲು ಶತ ಪ್ರಯತ್ನಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ವೇಗವಾಗಿ ಬಂದ ಲಾರಿಯೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಸಾವನ್ನಪ್ಪಿದ್ದು, ಇತರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಏತನ್ಮಧ್ಯೆ, ಯುಪಿ ಮಾಜಿ ಸಿಎಂ ಮತ್ತು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅಪಘಾತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ ಸರಕಾರ ಆಸರೆಯಾಗಬೇಕು ಎಂದು ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!