ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿಯಲ್ಲಿ ಭಾರೀ ಮಳೆ ಆಗುತ್ತಿದ್ದು, ಮಹಾಮಳೆಗೆ ಒಂದೇ ದಿನ ಐವರು ಬಲಿಯಾಗಿದ್ದಾರೆ. ಇದೀಗ ಐವರ ಕುಟುಂಬಸ್ಥರಿಗೂ ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪರಿಹಾರ ನೀಡಿದರು.
ಮುಖ್ಯಮಂತ್ರಿ ಗಳ ಸೂಚನೆಯ ಮೇರೆಗೆ ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಜನಾಡಿ ಹಾಗು ಬೆಳ್ಮ ಕ್ಕೆ ಭೇಟಿ ನೀಡಿ ಮನೆ ಕುಸಿತದಿಂದ ಸಾವನ್ನಪ್ಪಿದ ಕುಟುಂಬಗಳಿಗೆ ಸಾಂತ್ವನ ಹೇಳಿದರು.
ಇದೇ ಸಂದರ್ಭ ಸಂತ್ರಸ್ತ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೆರವು ವಿತರಿಸಿದರು.