Thursday, December 1, 2022

Latest Posts

ಅಮೆರಿಕದಲ್ಲಿ ಮತ್ತೊಂದು ಗುಂಡಿನ ದಾಳಿ: ಪೊಲೀಸ್ ಸೇರಿದಂತೆ ಐವರು ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಮೆರಿಕದಲ್ಲಿ ಮತ್ತೊಮ್ಮೆ ಗುಂಡಿನ ದಾಳಿ ನಡೆದಿದ್ದು, ಸ್ಥಳೀಯರನ್ನು ಭಯಭೀತರನ್ನಾಗಿಸಿದೆ. ಉತ್ತರ ಕೆರೊಲಿನಾದಲ್ಲಿ ಬಂದೂಕುಧಾರಿಯೊಬ್ಬ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಉತ್ತರ ಕೆರೊಲಿನಾದ ನ್ಯೂಸ್ ನದಿ ಗ್ರೀನ್‌ವೇ ಬಳಿ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮೃತರಲ್ಲಿ ಒಬ್ಬ ಪೋಲೀಸ್‌ ಅಧಿಕಾರಿ ಸೇರಿದ್ದಾರೆ.

ಆರೋಪಿ ಇನ್ನೂ ಸಿಕ್ಕಿಲ್ಲ, ಸದ್ಯ ಆತ ಯಾವುದೋ ಒಂದು ಗ್ಯಾರೇಜ್‌ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ಆರೋಪಿಗಾಘಿ ಬಲೆ ಬೀಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!