ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದಲ್ಲಿ ಪಾಳು ಬಿದ್ದ ಮನೆಯೊಂದರಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಚಳ್ಳಕೆರೆಯ ಗೇಟ್ ಸಮೀಪದ ಜೈಲ್ ರಸ್ತೆಯಲ್ಲಿ ಪಾಳುಬಿದ್ದಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಸಿಕ್ಕಿದೆ. ಈ ಮನೆಯಲ್ಲಿ ಜಗನ್ನಾಥರೆಡ್ಡಿ ಎನ್ನುವವರು ವಾಸವಾಗಿದ್ದರು.
ಜಗನ್ನಾಥರೆಡ್ಡಿ ಅವರ ಸಂಬಂಧಿ ಪವನ್‌ಕುಮಾರ್ ಎನ್ನುವವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಪೊಲೀಸರು ಪರಿಶೀಲನೆ ನಡೆಸಿದಾಗ ಐದು ಅಸ್ಥಿಪಂಜರ ದೊರೆತಿದೆ.
ಜಗನ್ನಾಥರೆಡ್ಡಿ, ಪತ್ನಿ ಪ್ರೇಮ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ ಹಾಗೂ ನರೇಂದ್ರ ರೆಡ್ಡಿ ಎನ್ನುವವರ ಅಸ್ಥಿಪಂಜರಗಳು ಇವಾಗಿವೆ. ಡಿವೈಎಸ್‌ಪಿ ಅನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವ ಬಗ್ಗೆ ಪರೀಕ್ಷಿಸಲಾಗುವುದು ಎಂದಿದ್ದಾರೆ.
ಅಸ್ಥಿಪಂಜರಗಳನ್ನು ಎಫ್‌ಎಸ್‌ಎ ಪರೀಕ್ಷೆಗೆ ಕಳಿಸಲು ತೀರ್ಮಾನಿಸಲಾಗಿದೆ. ಮನೆಯ ಸುತ್ತಮುತ್ತ ಏರಿಯಾಗಳಲ್ಲಿ ಆತಂಕ ಹೆಚ್ಚಾಗಿದೆ.