ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗವು ಇಂದು ದಿನಾಂಕವನ್ನು ಘೋಷಿಸಲಿದೆ.
ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ಚುನಾವಣಾ ದಿನಾಂಕವನ್ನು ಆಯೋಗವು ಇಂದು ಪ್ರಕಟಿಸಲಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ನಡೆಯಲಿದ್ದು, ಚುನಾವಣೆ ಪ್ರಕ್ರಿಯೆ ಕುರಿತಾದ ಮಾಹಿತಿ ನೀಡಲಿದೆ.
ನವೆಂಬರ್ ಎರಡನೇ ವಾರದಿಂದ ಡಿಸೆಂಬರ್ ಮೊದಲ ವಾರದ ನಡುವೆ ಯಾವುದೇ ಸಮಯದಲ್ಲಿ ಮತದಾನ ನಡೆಯಲಿದೆ ಎಂಬ ಮಾಹಿತಿ ಈಗಾಗಲೇ ಲಭ್ಯವಾಗಿದ್ದು, ಇಂದು ಅಧಿಕೃತವಾಗಿ ಘೋಷಣೆಯಾಗಲಿದೆ.