ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕೊಲ್ಕತ್ತಾದ ಮೆಟಿಯಾಬ್ರೂಜ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಕುಸಿದುಬಿದ್ದಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಭಾನುವಾರ ತಡರಾತ್ರಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ೧೫ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಕಟ್ಟಡದ ಅವಶೇಷಗಳಡಿ ಜನರು ಸಿಲುಕಿದ್ದು, ಶೋಧ ಕಾರ್ಯ ನಡೆಯುತ್ತಿದೆ.
ಅವಘಡದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕೊಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲನೆ ಮಾಡಿದ್ದಾರೆ.
VIDEO | Two people were killed while several others were injured after an under-construction building collapsed in Kolkata on Sunday night.
Officials said that the five-storey building collapsed in Hazari Mollah Bagan in the Garden Reach area around midnight. A search operation… pic.twitter.com/kZ9rwBEzrw
— Press Trust of India (@PTI_News) March 18, 2024