ಸ್ನಾನಕ್ಕೆ ತೆರಳಿದವರು ಸೇರಿದ್ದು ಮಸಣ: ಗೋದಾವರಿ ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳ ದಾರುಣ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಗೋದಾವರಿ ನದಿಯಲ್ಲಿ ಮುಳುಗಿ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಬ್ಬರು ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮರಾವತಿಯ ಖಾಸಗಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಾದ ಈ ಗುಂಪು ಸ್ನಾನಕ್ಕಾಗಿ ನದಿಗೆ ಇಳಿದಾಗ ಘಟನೆ ಸಂಭವಿಸಿದೆ. ನೀರಿನ ಹರಿವು ಹೆಚ್ಚಿದ್ದರಿಂದ ಐವರು ವಿದ್ಯಾರ್ಥಿಗಳು ಮುಳುಗಿ ಹೋಗಿದ್ದಾರೆ ಎನ್ನಲಾಗಿದೆ. ಈವರೆಗೆ ಮೂವರು ವಿದ್ಯಾರ್ಥಿಗಳ ಮೃತದೇಹಗಳು ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ರಕ್ಷಣಾ ತಂಡಗಳು ಸ್ಥಳದಲ್ಲಿ ತೀವ್ರ ಹುಡುಕಾಟ … Continue reading ಸ್ನಾನಕ್ಕೆ ತೆರಳಿದವರು ಸೇರಿದ್ದು ಮಸಣ: ಗೋದಾವರಿ ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳ ದಾರುಣ ಅಂತ್ಯ