Friday, July 1, 2022

Latest Posts

ಬೆಳ್ಳಿ ಪದಕ ಪಡೆದ ಐವರು ವಿದ್ಯಾರ್ಥಿನಿಯರಿಗೆ ಸನ್ಮಾನ

ಹೊಸದಿಗಂತ ವರದಿ ಮಡಿಕೇರಿ:

ಭೋಪಾಲ್‍ನಲ್ಲಿ ಇತ್ತೀಚೆಗೆ ನಡೆದ ಭಾರತೀಯ 12ನೇ ಹಾಕಿ ಹಿರಿಯ ಬಾಲಕಿಯರ ವಿಭಾಗದಲ್ಲಿ ಪಾಲ್ಗೊಂಡು ಬೆಳ್ಳಿ ಪದಕ ಪಡೆದಿರುವ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಐವರು ವಿದ್ಯಾರ್ಥಿನಿಯರನ್ನು ಜಿಲ್ಲಾಡಳಿತ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಬೆಳ್ಳಿ ಪದಕ ಪಡೆದ ಎಸ್.ಪಿ.ಲಿಖಿತ, ಲೀಲಾವತಿ ಬಿ. ಕೊಪ್ಪದ್, ಎಚ್.ಜಿ.ಧನುಶ್ರೀ, ಬಡುವಂಡ್ರ ಶ್ರೇಯಾ ಕಾವೇರಮ್ಮ, ಕರವಟ್ಟಿರ ದೀಪ್ತಿ ಅವರಿಗೆ ಶಾಲು, ಸ್ಮರಣಕೆ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಡಿಸಿ ಡಾ.ಬಿ.ಸಿ.ಸತೀಶ ಮಾತನಾಡಿ, ಭಾರತೀಯ ಹಾಕಿ ಹಿರಿಯ ಬಾಲಕಿಯರ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದಿರುವುದು ಶ್ಲಾಘನೀಯ. ತಾವು ಇತರರಿಗೆ ಆದರ್ಶವಾಗಿದ್ದು, ಅದನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಸಲಹೆ ನೀಡಿದರು. ಹಾಕಿ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳುವಂತಾಗಬೇಕು. ಜಿಲ್ಲಾಡಳಿತ ವತಿಯಿಂದ ಭಾರತೀಯ ಕ್ರೀಡಾ ಪ್ರಾಧಿಕಾರ ಸಂಸ್ಥೆಯನ್ನು ಮತ್ತಷ್ಟು ಅತ್ಯುನ್ನತ್ತ ಸ್ಥಾನಕ್ಕೆ ಕೊಂಡೊಯ್ಯಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss