ಬೀದರ್ ಬಳಿ ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟ್ರಕ್ ಹಾಗೂ ಆಟೋ ನಡುವೆ ಡಿಕ್ಕಿಯಾಗಿದ್ದು, ಐವರು ಮೃತಪಟ್ಟಿದ್ದಾರೆ. ಬೀದರ್‌ನ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ಅಪಘಾತ ಸಂಭವಿಸಿದ್ದು, ಒಬ್ಬರು ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇನ್ನು ಐವರು ಗಂಭೀರವಾಗಿ ಗಾಯಗೊಂಡಿದ್ದು, ಮನ್ನಾಖೇಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡಮನಳ್ಳಿ ಗ್ರಾಮಸ್ಥರು ಎಂದು ತಿಳಿದುಬಂದಿದೆ. ಈ ಸಂಬಂಧ ಬೆಮಳಖೇಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!