ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಝಲಾವರ್ ಜಿಲ್ಲೆಯ ಕೃಷಿ ಜಮೀನೊಂದರಲ್ಲಿ ಭಾನುವಾರ ಐದು ವರ್ಷದ ಬಾಲಕನೊಬ್ಬ 32 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದು, ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಹೊಲದಲ್ಲಿ ಆಟವಾಡುತ್ತಿದ್ದ ಪ್ರಹ್ಲಾದ್ ಹೋಗಿ ಕೊಳವೆ ಬಾವಿಗೆ ಬಿದ್ದಿದ್ದಾನೆ. ಆತನ ಪೋಷಕರು ಹೊಲದ ಇನ್ನೊಂದು ಬದಿಯಲ್ಲಿ ಕೆಲಸದಲ್ಲಿ ನಿರತರಾಗಿದ್ದರು, ಈ ಸಮಯದಲ್ಲಿ ಆತ ಬೋರ್‌ವೆಲ್ ಬಳಿಯ ಕಲ್ಲಿನ ಚಪ್ಪಡಿಯ ಮೇಲೆ ಕುಳಿತುಕೊಂಡು ಅದರಲ್ಲಿ ಜಾರಿ ಬಿದ್ದಿದ್ದಾನೆ ಎಂದು ವರದಿಯಾಗಿದೆ. ಪ್ರಹ್ಲಾದ್ ಪ್ರಸ್ತುತ 32 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿವೆ. ಸದ್ಯ ಮಗು ಸುರಕ್ಷಿತವಾಗಿ ಹೊರಬರಲಿ ಎಂದು ಪೋಷಕರು, ಗ್ರಾಮಸ್ಥರು ಪ್ರಾರ್ಥನೆ ಮಾಡುತ್ತಿದ್ದಾರೆ.
ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಸ್ಥಳೀಯ ಯಂತ್ರಗಳನ್ನು ಬಳಸಿಕೊಂಡು ಬಾಲಕನನ್ನು ಹೊರತೆಗೆಯಲು ಪ್ರಯತ್ನಿಸುತ್ತಿವೆ. ಎರಡು ದಿನಗಳ ಹಿಂದೆ ಕೊಳವೆ ಬಾವಿಯನ್ನು ಅಗೆಯಲಾಗಿತ್ತು. ಅದರಿಂದ ನೀರು ಹೊರಹರಿವು ಇರಲಿಲ್ಲ ಮತ್ತು ಅದನ್ನು ಮುಚ್ಚಲು ನಿರ್ಧರಿಸಲಾಗಿತ್ತು ಎಂದು ಪ್ರಹ್ಲಾದ್ ತಂದೆ ತಿಳಿಸಿದ್ದಾರೆ.