ಹೊಸದಿಗಂತ ಡಿಜಿಟಲ್ ಡೆಸ್ಕ್:
17 ವರ್ಷದ ಅಪ್ರಾಪ್ತನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಳಿಕ ದೈಹಿಕ ಹಲ್ಲೆ ನಡೆಸಿ ವಿಕೃತಿ ಮೆರೆದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.
ವಿಕೃತ ಕಾಮಿ ಅತ್ಯಾಚಾರ ಎಸಗಿದ್ದಲ್ಲದೇ ಬಾಲಕಿಯ ತಲೆಯನ್ನ ನೆಲಕ್ಕೆ ಗುದ್ದಿಸಿದ್ದಾನೆ. ಬಳಿಕ ಆಕೆಯ ಖಾಸಗಿ ಭಾಗವನ್ನು ಘಾಸಿಗೊಳಿಸಿದ್ದಾನೆ.
ಸದ್ಯ ಸಂತ್ರಸ್ತೆಯನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಾಲಕಿಯ ಖಾಸಗಿ ಭಾಗಗಳು ತೀವ್ರ ಹಾನಿಗೊಳಗಾಗಿವೆ. ಅಲ್ಲದೇ ಪ್ರಮುಖ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಬಾಲಕಿಯ ಜನನಾಂಗಗಳಿಗೆ 28 ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.