ಕಬ್ಬಿಗೆ ದರ ನಿಗದಿಪಡಿಸಿ, ರೈತರ ಹೊಲಗಳಿಗೆ ತಂತಿಬೇಲಿ ಅಳವಡಿಸಿ: ಸರ್ಕಾರಕ್ಕೆ ಆಮ್ ಆದ್ಮಿ ಪಕ್ಷ ಆಗ್ರಹ

ಹೊಸದಿಗಂತ ವರದಿ ಬೀದರ್: ಬೀದರ್ ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ 4,000 ರೂ.ರಿಂದ 4,500 ರೂ. ದರ ನಿಗದಿಪಡಿಸಬೇಕು ಹಾಗೂ ಅರಣ್ಯ ಪ್ರದೇಶಗಳಿಂದ ಬರುವ ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆಗಳನ್ನು ರಕ್ಷಿಸಲು ರೈತರ ಹೊಲಗಳಿಗೆ ತಂತಿಬೇಲಿ ಅಳವಡಿಸಬೇಕು ಎಂದು ಇಂದು ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿವರೆಗೆ ಪ್ರತಿಭಟನೆ ನಡೆಸಿ ಆಮ್ ಆದ್ಮಿ ಪಕ್ಷದ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಬ್ಬು ಬೆಳೆಗಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಉತ್ಪಾದನಾ ವೆಚ್ಚ ಹೆಚ್ಚಾಗಿರುವ ಹಿನ್ನೆಲೆಯಲ್ಲಿ … Continue reading ಕಬ್ಬಿಗೆ ದರ ನಿಗದಿಪಡಿಸಿ, ರೈತರ ಹೊಲಗಳಿಗೆ ತಂತಿಬೇಲಿ ಅಳವಡಿಸಿ: ಸರ್ಕಾರಕ್ಕೆ ಆಮ್ ಆದ್ಮಿ ಪಕ್ಷ ಆಗ್ರಹ