ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ‘ಹರ್ ಘರ್ ತಿರಂಗಾ ಅಭಿಯಾನ’ದಲ್ಲಿ ಭಾಗವಹಿಸಿದರು.
ಸಿಎಂ ಭೂಪೇಂದ್ರ ಪಟೇಲ್ ತ್ರಿವರ್ಣ ಧ್ವಜ ಹಾರಿಸುವ ಮೂಲಕ ರಾಜ್ಯದಲ್ಲಿ ಅಭಿಯಾನಕ್ಕೆ ನಾಂದಿ ಹಾಡಿದರು.
“ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪ್ರೇರಣೆ ಮತ್ತು ಮಾರ್ಗದರ್ಶನದಲ್ಲಿ ಆಗಸ್ಟ್ 8 ರಿಂದ ಆಗಸ್ಟ್ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿದೆ. ಇದರ ಅಡಿಯಲ್ಲಿ ನಾನು ನನ್ನ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಗುಜರಾತ್‌ನಲ್ಲಿ ಈ ಅಭಿಯಾನವನ್ನು ಪ್ರಾರಂಭಿಸಿದೆ.” ಎಂದು ಸಿಎಂ ಭೂಪೇಂದ್ರ ಪಟೇಲ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಪ್ರೋತ್ಸಾಹಿಸುವ ಹರ್ ಘರ್ ತಿರಂಗಾ ಅಭಿಯಾನವನ್ನು ಆಗಸ್ಟ್ 8 ರಿಂದ ಆಗಸ್ಟ್ 15 ರವರೆಗೆ ದೇಶಾದ್ಯಂತ ಹಮ್ಮಿಕೊಳ್ಳಲಾಗಿದೆ. ಗುಜರಾತ್‌ನಾದ್ಯಂತ ಈ ಹರ್ ಘರ್ ತಿರಂಗಾ ಅಡಿಯಲ್ಲಿ ಸರಿಸುಮಾರು 40 ರಿಂದ 50 ಲಕ್ಷ ತ್ರಿವರ್ಣಗಳನ್ನು ವಿತರಿಸಲಾಗುವುದು.