REPUBLIC DAY | ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಧ್ವಜಾರೋಹಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಸಾಥ್ ನೀಡಿದ್ದು, ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ.

ಧ್ವಜಾರೋಹಣದ ನಂತರ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಗಿದ್ದು, ಪರೇಡ್ ಆರಂಭವಾಯಿತು. ರಾಜಪಥ್ ಕರ್ತವ್ಯಪಥ ಎಂದು ಮರುನಾಮಕರಣವಾದ ಬಳಿಕ ನಡೆದ ಎರಡನೇ ಗಣರಾಜ್ಯೋತ್ಸವ ಇದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!